तुमकूरमध्ये आईने दोन चिमुकल्यांचा गळा घोटून आत्महत्या.
तुमकूर : तुमकूर जिल्ह्यात हृदय हेलावून टाकणारी घटना घडली आहे. पावगड तालुक्यातील कडपणकेरे येथे एका आईने स्वतःच्या दोन चिमुकल्यांचा खून करून आत्महत्या केली आहे.
23 वर्षीय सरिता असे आत्महत्या केलेल्या गृहिणीचे नाव असून, आत्महत्येपूर्वी तिने स्वतःच्या 4 वर्षांच्या मुलगा कौशिक आणि 2 वर्षांच्या मुलगी युक्तीचा गळा घोटून खून केला. त्यानंतर स्वतःही गळफास घेऊन जीवन संपवले. ही घटना आज (रविवार) पहाटे 4 वाजेच्या सुमारास घडली.
मिळालेल्या माहितीनुसार, सरिताचा विवाह सहा वर्षांपूर्वी त्याच गावातील संतोषसोबत झाला होता. संतोष हा व्यवसायाने ऑटो रिक्षा चालक असून, घटनेच्या वेळी तो घरी नव्हता.
मात्र, लग्नानंतरपासूनच पती आणि सासरच्या मंडळींकडून सरिताला हुंड्यासाठी सतत छळ होत असल्याचा आरोप नातेवाईकांकडून करण्यात आला आहे. या छळाला कंटाळून सरिताने हे टोकाचे पाऊल उचलले असावे, अशी प्राथमिक शंका व्यक्त होत आहे.
घटनास्थळी पावगड पोलिसांनी धाव घेऊन पंचनामा केला असून, प्रकरणी अधिक तपास सुरू आहे.
ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ತುಮಕೂರು : ತುಮಕೂರಿನಲ್ಲಿ ಭೀಕರ ಕೃತ್ಯವೊಂದು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 4 ವರ್ಷ ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಈ ಕೃತ್ಯ ಎಸಗಿರಬಹುದು ಎಂದು ಅನುಮಾನಿಸಲಾಗಿದೆ.ಈ ಬಗ್ಗೆ ತನಿಖೆ ನಡೆಯುತ್ತಿದೆ
ರಾಜ್ಯದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ (Suicide) ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ.
ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದಿದ್ದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ.
ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ.
ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ತಾಯಿ ಸರಿತಾ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

